ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ವಿವೇಕ ಸ್ಮೃತಿ -26” ರ ಸರಣಿ ಕಾರ್ಯಕ್ರಮ

0

ಪುತ್ತೂರು: ಯುವ ವಿದ್ಯಾರ್ಥಿಗಳಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಬಿತ್ತುವ ಹಾಗೂ ಅವರಲ್ಲಿ ಉತ್ತಮ ಧ್ಯೇಯ ಆದರ್ಶಗಳನ್ನು ಬೆಳೆಸುವ ಉದ್ದೇಶದಿಂದ ಆರಂಭಿಸಲಾದ “ವಿವೇಕ ಸ್ಮೃತಿ – 26” ಸರಣಿ ಕಾರ್ಯಕ್ರಮವು ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಇವರ ಸಹಕಾರದೊಂದಿಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಪ್ರಾರಂಭಗೊಂಡಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಉಡುಪಿ ಎಂಎಜಿಎಂ ಸಂಧ್ಯಾ ಕಾಲೇಜಿನ ಡಾ. ದೇವಿದಾಸ್ ಎಸ್. ನಾಯಕ್ ಅವರು ಮಾತನಾಡಿ “ಸ್ವಾಮಿ ವಿವೇಕಾನಂದರ ಚಿಂತನೆಗಳು ಹಾಗೂ ಯುವಜನತೆಯ ಪಾತ್ರದ ಬಗ್ಗೆ ವಿವರಿಸಿ, ಸ್ವಾಮಿ ವಿವೇಕಾನಂದರು ಭಾರತದ ಸಂಸ್ಕೃತಿಯ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿ, ವೇದಾಂತ ಜ್ಞಾನ ಹಾಗೂ ಭ್ರಾತೃತ್ವದ ಸಂದೇಶವನ್ನು ಜಗತ್ತಿನಲ್ಲಿ ಜಾಗೃತಗೊಳಿಸಿದ ಮಹಾನ್ ವ್ಯಕ್ತಿಯಾಗಿದ್ದರು. ಅವರ ಚಿಂತನೆಗಳು ಯುವಜನತೆಯ ಮೇಲೆ ಅಪಾರ ಪ್ರಭಾವ ಬೀರಿವೆ ಎಂದು ಹೇಳಿದರು. ಯುವಶಕ್ತಿ ಬಹಳ ಪ್ರಭಾವಶಾಲಿಯಾಗಿದೆ. ಯುವಶಕ್ತಿಯೇ ದೇಶದ ಶಕ್ತಿ. ಆ ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸಿದರೆ ದೇಶವು ಅಭಿವೃದ್ಧಿಯ ಮಾರ್ಗದಲ್ಲಿ ಮುನ್ನಡೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಆದ್ದರಿಂದ ಸ್ವಾಮಿ ವಿವೇಕಾನಂದರ ಆದರ್ಶಗಳು ಇಂದಿನ ಯುವಜನತೆಗೆ ಅತ್ಯಂತ ಪ್ರೇರಣಾದಾಯಕವಾಗಿವೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ಟ ಬಂಗಾರಡ್ಕ ಮಾತ್ನಾಡುತ್ತಾ “ನಮ್ಮ ಸಂಸ್ಕೃತಿಯ ಹಿಂದೆ ಆಳವಾದ ಆಲೋಚನೆಗಳಿವೆ. ರೋಮಾಂಚನಗೊಳಿಸೋ ವ್ಯಕ್ತಿತ್ವವನ್ನು ಹೊಂದಿದ ವ್ಯಕ್ತಿ ವೀವೇಕಾನಂದರು. ಆದ್ದರಿಂದ ಪ್ರೇರೇಪಣೆಗೊಂಡು ವಿದ್ಯಾರ್ಥಿಗಳು ಮುಂದಿನ ಹೆಜ್ಜೆಯನ್ನು ಇಡಬೇಕು” ಎಂದು ನುಡಿದು ಶುಭ ಹಾರೈಸಿದರು.

 ಈ ಕಾರ್ಯಕ್ರಮದಲ್ಲಿ ಡಾ. ವಿಜಯ ಸರಸ್ವತಿ ನಿರ್ದೇಶಕರು, ವಿವೇಕಾನಂದ ಸಂಶೋಧನ ಕೇಂದ್ರ ,ಡಾ. ವಿದ್ಯಾ ಎಸ್ ಸಂಯೋಜಕರು ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ,  ಮುರಳೀಧರ ಎಸ್ ಪ್ರಾಂಶುಪಾಲರು ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಉಪಸ್ಥಿತರಿದ್ದರು.

ಡಾಕ್ಟರ್ ವಿಜಯ ಸರಸ್ವತಿ ಸ್ವಾಗತಿಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಹಿರಿಯ ಉಪನ್ಯಾಸಕಿ ಜಯಲಕ್ಷ್ಮಿ ಎಸ್ ಪ್ರಾರ್ಥಿಸಿದರು.ವಿವೇಕಾನಂದ ಪಾಲಿಟೆಕ್ನಿಕ್ ಸಿವಿಲ್ ವಿಭಾಗ ಮುಖ್ಯಸ್ಥರು ರವಿರಾಮ್ ಎಸ್ ವಂದಿಸಿದರು. ವಿವೇಕಾನಂದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಾ ಹಾಗೂ ವಿದ್ಯಾರ್ಥಿಗಳು ನಿರೂಪಣೆ ಹಾಗೂ ನಿರ್ವಹಣೆಯನ್ನು ನೆರವೇರಿಸಿದರು.

LEAVE A REPLY

Please enter your comment!
Please enter your name here