







ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕಿನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪಾಣಾಜೆಯ ಸುಭೋದ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಡೆದ 3 ತಿಂಗಳ ಉಚಿತ ಟ್ಯೂಶನ್ ಕ್ಲಾಸ್ ತರಬೇತಿಯ ಸಮಾರೋಪ ಸಮಾರಂಭವನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ರವೀಂದ್ರ ಭಂಡಾರಿಯವರು ಉದ್ಘಾಟಿಸಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಯುವಂತಹ ಯಾವುದೇ ಕಾರ್ಯಕ್ರಮಗಳು ಆಗಲಿ ಸಮಾಜದ ಅಭಿವೃದ್ಧಿಗೆ ಪೂರಕವಾದಂತದ್ದು. ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮೂಡಿ ಬಂದ ಈ ಮೂರು ತಿಂಗಳ ಟ್ಯೂಷನ್ ಕ್ಲಾಸ್ ನಿಂದ ಮಕ್ಕಳಿಗೆ ಅದೆಷ್ಟೋ ಪ್ರಯೋಜನವಾಗಿದೆ ಮಕ್ಕಳು ಪರೀಕ್ಷೆಗೆ ಉತ್ತಮ ರೀತಿಯಲ್ಲಿ ತಯಾರಿ ನಡೆಸಿ ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು.


ಶಾಲಾ ಮುಖ್ಯ ಗುರುಗಳಾದ ನಿರ್ಮಲ ಕೆ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಶಾಲೆಗೆ ದೊರೆತಂತಹ ಈ ಮೂರು ತಿಂಗಳ ಉಚಿತ ಟ್ಯೂಷನ್ ತರಬೇತಿಯಿಂದ ಮಕ್ಕಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ತುಂಬಾ ಸಹಕಾರಿಯಾಗಿದೆ. ಇಂತಹ ಒಂದು ಉತ್ತಮ ಕಾರ್ಯಕ್ರಮವನ್ನು ನಮ್ಮ ಶಾಲೆಗೆ ಒದಗಿಸಿ ಕೊಟ್ಟಂತಹ ಗ್ರಾಮಾಭಿವೃದ್ಧಿ ಯೋಜನೆಗೆ ನಾವೆಂದೂ ಚಿರಋಣಿಗಳು ಎಂದು ಖುಷಿ ಪಟ್ಟರು.



ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಹಾಜಿ ಅಬೂಬಕರ್ ಆರ್ಲಪದವುರವರು ಮಾತನಾಡುತ್ತ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನಡೆಯುವಂತಹ ಕಾರ್ಯಕ್ರಮ ದೇಶಕ್ಕೆ ಮಾದರಿ ಶೈಕ್ಷಣಿಕವಾಗಿ ಮಕ್ಕಳ ಬೆಳವಣಿಗೆ ತಂದ ಇಂತಹ ಕಾರ್ಯಕ್ರಮ ಬಹಳ ಅವಿಸ್ಮರಣೀಯ ಎಂದು ಶುಭ ಹಾರೈಸಿದರು. ಟ್ಯೂಷನ್ ಕ್ಲಾಸ್ ಪಡೆದುಕೊಂಡ ವಿದ್ಯಾರ್ಥಿಗಳಾದ ದೀಪ್ತಿ ಲಕ್ಷ್ಮಿ ಹಾಗೂ ಮಹಮ್ಮದ್ ಬಿಲಾಲ್ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್, ಸೇವಾ ಪ್ರತಿನಿಧಿ ಜಯಶ್ರೀ, ಶಾಲಾ ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










