







ಪುತ್ತೂರು: ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಚೆನ್ನಾವರ ಕಾಪುತಮೂಲೆ ನಿವಾಸಿ ಚಂದ್ರ ನಾಯ್ಕ (66ವ.) ಮಾ.15ರಂದು ಹೃದಯಾಘಾತದಿಂದ ನಿಧನರಾದರು.


ಮೃತರು ಪತ್ನಿ ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ಗುಲಾಬಿ, ಮಕ್ಕಳಾದ ಪತ್ರಕರ್ತ ಪ್ರವೀಣ್ ಚೆನ್ನಾವರ, ಪುತ್ತೂರು ತಾಲೂಕು ಮರಾಠಿ ಯುವ ವೇದಿಕೆಯ ಅಧ್ಯಕ್ಷ ನವೀನ್ ಕುಮಾರ್, ಭೀಮಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಲೆಕ್ಕಾಧಿಕಾರಿ ಪ್ರಶಾಂತ್ ಕುಮಾರ್ ಅವರನ್ನು ಅಗಲಿದ್ದಾರೆ.



ಮೃತರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ರಾಮಕೃಷ್ಣ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ನಿರ್ದೇಶಕ ಬಿ.ದಯಾಕರ ಆಳ್ವ, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷೆ ಇಂದಿರಾ ಬಿ.ಕೆ., ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಗಿರಿಶಂಕರ ಸುಲಾಯ, ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು,ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ., ಪುತ್ತೂರು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕರುಣಾಕರ ನಾಯ್ಕ ಪಾಂಗ್ಲಾಯಿ,ಕರ್ನಾಟಕ ಲ್ಯಾಂಪ್ ಸಹಕಾರ ಮಹಾಮಂಡಳ ನಿಯಮಿತ ಇದರ ಉಪಾಧ್ಯಕ್ಷ ಮಂಜುನಾಥ ಎನ್.ಎಸ್ ,ಪುತ್ತೂರು ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಪೂವಪ್ಪ ನಾಯ್ಕ ಕುಂಞಕುಮೇರು,ಪುತ್ತೂರು ಮರಾಟಿ ಯುವ ವೇದಿಕೆಯ ಮಾಜಿ ಅಧ್ಯಕ್ಷ ಅಶೋಕ ನಾಯ್ಕ ಸೊರಕೆ,ಸವಣೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಸುಂದರಿ ಬಿ.ಎಸ್., ಮಾಜಿ ಸದಸ್ಯರಾದ ವಿನೋದಾ ರೈ,ಸತೀಶ್ ಅಂಗಡಿಮೂಲೆ, ಸತೀಶ್ ಬಲ್ಯಾಯ,ಸಾಮಾಜಿಕ ಮುಂದಾಳು ರಾಮಕೃಷ್ಣ ಪ್ರಭು ,ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ,ವಿಠಲ ಶೆಟ್ಟಿ ಬಂಬಿಲ ,ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ವಲಯ ಉಪಾಧ್ಯಕ್ಷ ಸುಬ್ರಾಯ ಗೌಡ ,ದೀಕ್ಷಿತ್ ಜೈನ್ ಚೆನ್ನಾವರಗಡಿಗುತ್ತು ,ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ, ಚೆನ್ನಾವರ ಅಭ್ಯುದಯ ಯುವಕ ಮಂಡಲ,ಸವಣೂರು ಯುವಕ ಮಂಡಲ, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಸಹಿತ ಹಲವಾರು ಮಂದಿ ಭೇಟಿ ನೀಡಿದರು.










