






ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಸಾಧಕಿಯೊಬ್ಬರನ್ನು ಗೌರವಿಸಲಾಯತು.


ಸಂಘದ ಅಧ್ಯಕ್ಷೆ ಕುಸುಮಾ ಚಂದಪ್ಪ ಕೃಷ್ಣನಗರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮೋತಿಬಾಯಿ ಕೆ.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳಾ ಸಬಲೀಕರಣದ ಕುರಿತು ಮಾಹಿತಿ ನೀಡಿದರು.



ದಾರಂದಕುಕ್ಕುವಿನಲ್ಲಿ ಪಾನಿಪೂರಿ ಘಟಕ ನಿರ್ಮಾಣ ಮಾಡಿರುವ ಧನ್ಯಾ ಮನೋಜ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಗೌರವಾಧ್ಯಕ್ಷೆ ವಾರಿಜೆ ಬೆಳಿಯಪ್ಪ ಗೌಡ ಉಪಸ್ಥಿತರಿದ್ದರು. ಸಂಧ್ಯಾ ಶಶಿಧರ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಲೇಖಾಗೋವರ್ಧನ್ ವಂದಿಸಿದರು. ಸಮಾರಂಭದ ಆರಂಭದಲ್ಲಿ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಂಜೆ ನಡೆದ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಾತೃ ಸಂಘದ ಗೌರವಾಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಪ್ರಧಾನ ಕಾರ್ಯದರ್ಶಿ ಡಾ. ಶ್ರೀಧರ್ ಗೌಡ ಪಾಣತ್ತಿಲ, ನಿಕಟಪೂರ್ವ ಅಧ್ಯಕ್ಷ ರವಿ ಮುಂಗ್ಲಿಮನೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.










