ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈಯವರಿಗೆ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿ

0

ಪುತ್ತೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಪುತ್ತೂರು ಮತ್ತು ಕಡಬ ತಾಲೂಕು ಘಟಕದಿಂದ ಮಾ.15ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈಯವರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಸಂಸ್ಥೆಯನ್ನು ಹುಟ್ಟು ಹಾಕಿ ಶೈಕ್ಷಣಿಕ ಕ್ರಾಂತಿಯನ್ನು ಉಂಟು ಮಾಡಿದ ಸಾಧನೆಯನ್ನು ಮನಗಂಡು ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here