








ಕಾವು : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಪುತ್ತೂರು ಮತ್ತು ಕಡಬ ತಾಲೂಕ ಘಟಕದಿಂದ ಮಾರ್ಚ್ 15ರಂದು ಪುತ್ತೂರು ಬಂಟರ ಭವನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾಜ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಶಾಸಕ ಅಶೋಕ್ ರೈ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷರಾದ ಅಬ್ದುಲ್ ಅಜೀಜ್ ಇವರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಸಂಸ್ಥೆಯನ್ನು ಹುಟ್ಟು ಹಾಕಿ ಶೈಕ್ಷಣಿಕ ಕ್ರಾಂತಿಯ ಸಾಧನೆಯನ್ನು ಮನಗಂಡು ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.















