






ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಅವರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪುತ್ತೂರು ಮತ್ತು ಕಡಬ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 15ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ಅವರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.



ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿರುವುದು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಅವಕಾಶ ಒದಗಿಸಿರುವ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಮುಖ್ಯಗುರುಗಳು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಜಯರಾಮ ಕೆದಿಲಾಯ ಶಿಬರರನ್ನು ಅಭಿನಂದಿಸಿದ್ದಾರೆ.












