






ಪುತ್ತೂರು: ಸಕ್ಕರೆ ಕಾಯಿಲೆಯನ್ನು ತಡೆಗಟ್ಟುವಿಕೆ ಮತ್ತು ಆರೋಗ್ಯ ಸಂರಕ್ಷಣೆ ಕುರಿತು ಮಾಹಿತ ಕಾರ್ಯಕ್ರಮವು ಪುತ್ತೂರು ಸಿಟಿ ಹಾಸ್ಟಿಟಲ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಮಾ.22ರಂದು ಬೆಳಿಗ್ಗೆ ಗಂಟೆ 10.15 ರಿಂದ ಮಧ್ಯಾಹ್ನ ಗಂಟೆ 12.45ರ ತನಕ ಪುತ್ತೂರು ಸಿಟಿ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ.


ಸಕ್ಕರೆ ಕಾಯಿಲೆಯ ಲಕ್ಷಣಗಳು ಮತ್ತು ಕಾರಣಗಳು, ನಿರ್ವಹಣೆ ಮತ್ತು ಚಿಕಿತ್ಸೆ ಸಹಿತ ಆರೋಗ್ಯ ಸಂರಕ್ಷಣೆ ಮತ್ತು ತಡೆಗಟ್ಟುವಿಕೆಯ ಕುರಿತು ವಿಶೇಷ ಮಾಹಿತಿ ನೀಡಲಾಗುವುದು. ಆಸಕ್ತರು ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.













