ನೃತ್ಯ ನಿನಾದ ಕಡಬ ರಜತ ಸಂಭ್ರಮ–“ರಜತಾರ್ಣವಮ್” ಆಮಂತ್ರಣ ಬಿಡುಗಡೆ

0

ಕಡಬ: ನೃತ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ “ನೃತ್ಯ ನಿನಾದ ಕಲಾ ಕೇಂದ್ರ ಕಡಬ” ಇದರ ರಜತ ಸಂಭ್ರಮದ ಅಂಗವಾಗಿ ನಡೆಯಲಿರುವ “ರಜತಾರ್ಣವಮ್” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿಶ್ವ ಹಿಂದೂ ಪರಿಷತ್ ಕಡಬ ಪ್ರಖಂಡದ ಗೌರವಾಧ್ಯಕ್ಷರಾದ ಕಡ್ಯ ವಾಸುದೇವ ಭಟ್ ಅವರು ಬಿಡುಗಡೆ ಮಾಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೃತ್ಯ ನಿನಾದ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಶಾಸ್ತ್ರೀಯ ನೃತ್ಯಕಲೆಗಳನ್ನು ಪೋಷಿಸಿ, ಅನೇಕ ಪ್ರತಿಭಾವಂತರನ್ನು ಸಮಾಜಕ್ಕೆ ಪರಿಚಯಿಸಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಇಂತಹ ಸಾಂಸ್ಕೃತಿಕ ಚಟುವಟಿಕೆಗಳು ಯುವಪೀಳಿಗೆಗೆ ಮಾರ್ಗದರ್ಶನ ನೀಡುವುದರ ಜೊತೆಗೆ ನಮ್ಮ ಸಂಪ್ರದಾಯವನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾವಿದರಾದ ವಿದ್ವಾನ್ ಮಂಜುನಾಥ್ ಪುತ್ತೂರು, ವಿದುಷಿ ಪ್ರಮೀಳಾ ಲೋಕೇಶ್ ಹಾಗೂ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಅಶೋಕ್ ಹಾಗೂ ಕಲಾಕೇಂದ್ರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here