






ಪುತ್ತೂರು: ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾಗುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಭಾವನಾತ್ಮಕ ನಿಯಂತ್ರಣ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಚಂದ್ರಕಾಂತ ಗೋರೆ, ಮನೋಶಾಸ್ತ್ರ ವಿಭಾಗದ ಮುಖ್ಯಸ್ಥರು, ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ವ್ಯಕ್ತಿಯ ದೃಷ್ಟಿಕೋನ, ದೋರಣೆ ಹಾಗೂ ಮನೋಭಾವ ಇವುಗಳ ಸಮನ್ವಯದಿಂದ ಜೀವನದಲ್ಲಿ ಸಫಲತೆ ಸಾಧಿಸಲು ಸಾಧ್ಯವೆಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಸಮರ್ಪಕವಾಗಿ ನಿಯಂತ್ರಿಸಿಕೊಂಡು ಸಾಧನೆಗೆ ದಾರಿ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದರಿಂದ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ಉತ್ತಮಗೊಳಿಸಿಕೊಂಡು ಭವಿಷ್ಯದಲ್ಲಿ ಯಶಸ್ಸು ಗಳಿಸಬಹುದು ಎಂದು ತಿಳಿಸಿದರು.













