






ನೆಲ್ಯಾಡಿ: ಜೆಸಿಐ ನೆಲ್ಯಾಡಿ ಇದರ ವತಿಯಿಂದ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರದ ಉದ್ಘಾಟನೆ ಮಾ.23ರಂದು ನೆಲ್ಯಾಡಿ ದುರ್ಗಾ ಕಾಂಪ್ಲೆಕ್ಸ್‌ನ ಆರಾಧ್ಯ ಬ್ಯೂಟಿ ಪಾರ್ಲರ್‌ನಲ್ಲಿ ನಡೆಯಿತು.
ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಪ್ರವೀಣಿ ಸುಧಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೋಳಿತ್ತಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಜಯಂತಿ ಬಿ.ಎಂ.ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಂಧ್ಯಾ ಅವಿನಾಶ್ ರೈ, ರಂಜಿತಾರವಿಚಂದ್ರ ಅವರು ಕೌಶಲ್ಯಾಭಿವೃದ್ಧಿ, ವ್ಯಕ್ತಿತ್ವ ವಿಕಾಸ ಮತ್ತು ಸಂವಹನ ಕೌಶಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಸುಪ್ರಿತಾ ರವಿಚಂದ್ರ ನಿರೂಪಿಸಿದರು. ದೀಪಕ್ ನೆಲ್ಯಾಡಿ ಜೇಸಿವಾಣಿ ವಾಚಿಸಿದರು. ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ವಂದಿಸಿದರು.












