







ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಇದರ ವತಿಯಿಂದ 20ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಅರ್ಚಕರಾದ ನವೀನ್ ಶಾಂತಿ ಅಡ್ಯಾಲು ಅಜಿಲಮೊಗರುರವರ ನೇತೃತ್ವದಲ್ಲಿ ವೈದಿಕ ವಿಧಿ-ವಿಧಾನಗಳೊಂದಿಗೆ ಜರಗಲಿದೆ.





ಪ್ರಾತಃಕಾಲ ಬೆಳಿಗ್ಗೆ ಗಂಟೆ 6ರಿಂದ ಸ್ವಸ್ತಿ ಪುಣ್ಯಾಹ, 7ರಿಂದ ಗಣಹೋಮ, 7.30 ರಿಂದ ನವಕ ಕಲಶಾಭಿಷೇಕ, 8 ರಿಂದ ಬ್ರಹ್ಮಶ್ರೀ ನಾರಾಯಣಗುರು ಸಹಸ್ರನಾಮಾವಳಿ, 9.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1 ರಿಂದ ಪ್ರಸಾದ ವಿತರಣೆ ಮತ್ತು ಪ್ರಸಾದ ಭೋಜನ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಲ್ಲವ ಸಂಘದ ಗ್ರಾಮ ಸಮಿತಿಗಳು, ಬಿಲ್ಲವ ಮಹಿಳಾ ವೇದಿಕೆ ಪುತ್ತೂರು, ಯುವವಾಹಿನಿ ಪುತ್ತೂರು, ಉಪ್ಪಿನಂಗಡಿ, ಕಡಬ ಘಟಕಗಳು, ಬಿಲ್ಲವ ವಿದ್ಯಾರ್ಥಿ ಸಂಘ ಪುತ್ತೂರು, ತಾಲೂಕಿನ ಮೂರ್ತೆದಾರರ ಸೇವಾ ಸಹಕಾರಿ ಸಂಘಗಳು ಸಹಕಾರ ನೀಡಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕಾರ್ಯದರ್ಶಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್ ಪ್ರಥಮ ಉಪಾಧ್ಯಕ್ಷ ಚಿದಾನಂದ ಸುವರ್ಣ, ದ್ವಿತೀಯ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಕೇಕುಡೆ, ಜೊತೆ ಕಾರ್ಯದರ್ಶಿ ಪುರುಷೋತ್ತಮ ಬರೆಂಬೆಟ್ಟು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕ ಹಾಗೂ ಸರ್ವ ಸದಸ್ಯರು, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಸಂಚಾಲಕ ಅಶೋಕ್ ಕುಮಾರ್ ಪಡ್ಪು, ಸದಸ್ಯರಾದ ಶ್ರೀಮತಿ ವಿಮಲ ಸುರೇಶ್, ಮಾಧವ ಸಾಲ್ಯಾನ್ ಕುರೆಮಜಲು, ಮೋಹನ್ ತೆಂಕಿಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









