







ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ಸಾಂಸ್ಕೃತಿಕ ಕಲಾ ವೇದಿಕೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಪ್ರಯುಕ್ತ ಏ.10 ರಂದು ನಡೆಯುವ ಸಭಾ ಕಾರ್ಯಕ್ರಮ ಹಾಗೂ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆರವರಿಂದ ಸಹಸ್ರ ಕವಚ ಮೋಕ್ಷ ಯಕ್ಷಗಾನ ಪ್ರಸಂಗ ನಡೆಯಲಿದೆ.



ಈ ಪ್ರಯುಕ್ತ ಮಾ.23 ರಂದು ದರ್ಬೆ ಅಶ್ವಿನಿ ಹೊಟೇಲ್ ಸಭಾಂಗಣದಲ್ಲಿ ಸಂಜೆ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಯಕ್ಷಗಾನ ಅರ್ಥಧಾರಿಣಿ ಶ್ರೀಮತಿ ಶುಭ ಅಡಿಗರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅನಿವಾಸಿ ಉದ್ಯಮಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಮ ರೈ, ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ, ಅಧ್ಯಕ್ಷ ದೇರ್ಲ ಕರುಣಾಕರ್ ರೈ, ನಿಕಟಪೂರ್ವ ಅಧ್ಯಕ್ಷ ಜೈರಾಜ್ ಭಂಡಾರಿ, ಕಾರ್ಯದರ್ಶಿ ಚಂದ್ರಹಾಸ ರೈ ಬಿ, ಕೋಶಾಧಿಕಾರಿ ಪ್ರೊ|ದತ್ತಾತ್ರೇಯ ರಾವ್ ಸಹಿತ ಹಲವಾರು ಉಪಸ್ಥಿತರಿದ್ದರು.












