






ಪುತ್ತೂರು: ದರ್ಬೆಯಲ್ಲಿ ವ್ಯವಹರಿಸುತ್ತಿರುವ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘದಲ್ಲಿ ಕಳೆದ 37 ವರ್ಷಗಳಿಂದ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಭಡ್ತಿ ಪಡೆದು ಪ್ರಸ್ತುತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಮಾ.28ರಂದು ಸೇವಾ ನಿವೃತ್ತಿ ಹೊಂದಲಿರುವ ಈಶ್ವರ ಭಟ್ ಎಮ್.ರವರಿಗೆ ಸಂಘದ ವತಿಯಿಂದ ಮಾ.28ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಸಭಾಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಲಿದೆ.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಈಶ್ವರ ಭಟ್ರವರನ್ನು ಸನ್ಮಾನಿಸಲಿದ್ದಾರೆ. ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಟಿ.ವಿ. ರವೀಂದ್ರನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಮ್., ಪುತ್ತೂರು ಕೈಗಾರಿಕಾ ಸಂಘದ ಅಧ್ಯಕ್ಷ ಕೇಶವ ಅಮೈ, ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಡಾ| ಪಿ.ಕೆ.ಎಸ್. ಭಟ್ ಹಾಗೂ ಮೊನಾಕೊ ಹಣಕಾಸು ಯುನೈಟೆಡ್ ಫೆಡರೇಶನ್ ಆಫ್ ಟ್ರಾವೆಲ್ ಏಜಂಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ವಿಲಿಯಂ ಡಿಸೋಜರವರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.













