







ಪುತ್ತೂರು: ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಾ.26ರಂದು 12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಾಣ ಪ್ರಸಾದ, ವೈದಿಕ ಮಂತ್ರಾಕ್ಷತೆ ನಡೆದು, ಅನ್ನಸಂತರ್ಪಣೆ ನಡೆಯಿತು.



ದೇವಾಲಯದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ, ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕಿನಾರ, ಅರ್ಚಕ ಪದ್ಮನಾಭ ಕುಂಜತ್ತಾಯ, ಪವಿತ್ರಪಾಣಿ ರತ್ನಾಕರ ಕುಂಜತ್ತಾಯ, ಸದಸ್ಯರುಗಳಾದ ನವೀನ್ ಕುಮಾರ್ ಶೆಟ್ಟಿ ಮುಗೇರುಗುತ್ತು, ಆಶಾ ಪ್ರವೀಣ್ ಕಂಪ, ಶಿವರಾಮ ಗೌಡ ಮೆದು, ಮೋನಪ್ಪ ಗೌಡ ಆರೇಲ್ತಡಿ, ರಾಕೇಶ್ ರೈ ಕೆಡೆಂಜಿ ಹಾಗೂ ಪ್ರೇಮ ಪುಟ್ಟಣ ನಾಯ್ಕ ಆರೇಲ್ತಡಿ ಹಾಗೂ ಊರ ಮತ್ತು ಪರವೂರ ಭಕ್ತಾದಿಗಳು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು.




ನಳಿನ್ ಕುಮಾರ್ ಕಟೀಲ್ ಭೇಟಿ
ಮಾಜಿ ಸಂಸದರಾಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರು ಮಾ.26ರಂದು ರಾತ್ರಿ ದೇವಾಲಯಕ್ಕೆ ಭೇಟಿ ನೀಡಿ, ಜಾತ್ರೋತ್ಸವ ಕಾರ್‍ಯಕ್ರಮದಲ್ಲಿ ಪಾಲ್ಗೊಂಡರು. ನಳಿನ್ ಕುಮಾರ್ ಅವರನ್ನು ದೇವಾಲಯದ ವತಿಯಿಂದ ಗೌರವಿಸಲಾಯಿತು.











