






ನೆಲ್ಯಾಡಿ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾ.28ರಂದು ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಬಿ.ವೈ.ರಾಘವೇಂದ್ರ ಅವರಿಗೆ ಶಾಲು ಹೊದಿಸಿ, ದೇವರ ಫೋಟೋ ನೀಡಿ ಗೌರವಿಸಿದರು. ಬಿ.ವೈ.ರಾಘವೇಂದ್ರ ಅವರ ಜೊತೆ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಪುತ್ರ ಸುಭಾಷ್ ರಾಘವೇಂದ್ರ ಹಾಗೂ ಸೊಸೆ ಶ್ರವಣ ಜೊತೆಗಿದ್ದು ದೇವರ ದರ್ಶನ ಪಡೆದರು.



ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಸೌತಡ್ಕ ನೈಮಿಷ ವೆಂಚರ್ಸ್ ಮಾಲಕ ಬಾಲಕೃಷ್ಣ ನೈಮಿಷ, ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭಾಕರ ಮಲ್ಲಿಗೆಮಜಲು, ಲಿಂಗಪ್ಪ ಕಡೀರ, ಪ್ರಶಾಂತ್ ಪೂವಾಜೆ ಮತ್ತಿತರರು ಉಪಸ್ಥಿತರಿದ್ದರು.










