ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ಹರಿದುಬಂದ ಹಸಿರುವಾಣಿ ಹೊರೆಕಾಣಿಕೆ

0

ಏ.4ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ | ಏ.2 ಬ್ರಹ್ಮರಥೋತ್ಸವ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಏ.4ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮಸ್ಥರಿಂದ ಮಾ.29ರಂದು ಸಾಯಂಕಾಲ ಹಸಿರುವಾಣಿ ಸಮರ್ಪಣೆ ನಡೆಯಿತು.

ಮಾ.29ರಂದು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ನಡೆಯಿತು. ಸಾಯಂಕಾಲ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯು ಕೊಡಿಪಾಡಿ ಶಾಲೆ, ಬಟ್ರುಪ್ಪಾಡಿ, ಅರ್ಕ, ಹಣಿಯೂರು ಪಲ್ಲತ್ತಾರು ಮೂಲಕ ಕ್ಷೇತ್ರ ತಲುಪಿ, ಹೊರೆಕಾಣಿಕೆ ಸಮರ್ಪಣೆಗೊಂಡಿತು. ಮಕ್ಕಳ ಕುಣಿತ ಭಜನೆ ಮೆರವಣಿಗೆಗೆ ಮೆರುಗು ನೀಡಿತು‌.  ಬಳಿಕ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ ಪ್ರಾಸಾದಶುದ್ದಿ ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜನಾರ್ದನ  ಎರ್ಕಡಿತ್ತಾಯ,  ಸದಸ್ಯರಾದ ಸುಬ್ರಹ್ಮಣ್ಯ ಗೌಡ ಹಣಿಯೂರು, ಧೀರಜ್ ಗೌಡ ಹಿರ್ಕುಡೇಲು, ಸುಧೀರ್ ಪ್ರಸಾದ್ ಆನಾಜೆ, ಚಂದ್ರಶೇಖರ ನಾಯ್ಕ ಕುದ್ದಾನು, ಕೇಶವ ಪೆಲತ್ತಡಿ, ಸರೋಜಿನಿ ಆರ್ಕ, ಯಶೋಧ ಹೊಸೊಕ್ಲು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here