






ಪುತ್ತೂರು: ರಾಜ್ಯದ ಪ್ರತಿಷ್ಠಿತ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ದಿನಪತ್ರಿಕೆ ಜಂಟಿಯಾಗಿ ನೀಡುವ 2026 ನೇ ಸಾಲಿನ ‘ಸುವರ್ಣ ಕನ್ನಡಿಗ’ ಪ್ರಶಸ್ತಿ ಪುರಸ್ಕೃತರಾದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ, ಸಾಹಿತ್ಯ, ಶಿಕ್ಷಣ, ಸಾಮಾಜಿಕ ಕ್ಷೇತ್ರದ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್‌ರವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹೋಬಳಿ ಘಟಕದ ವತಿಯಿಂದ ಎ.01 ರಂದು ಅಪರಾಹ್ನ ಸಿರಿಕಡಮಜಲು ಕೃಷಿ ಕ್ಷೇತ್ರದಲ್ಲಿ ಗೌರವಾರ್ಪಣೆ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.


ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳಿಂದ ಸಿರಿ ಕಡಮಜಲು ಕೃಷಿ ಕ್ಷೇತ್ರದಲ್ಲಿ ಪ್ರಕೃತಿ ವೀಕ್ಷಣೆ, ಸಂವಾದ ಕಾರ್ಯಕ್ರಮ ನಡೆಯಲಿದ್ದು ಇದೇ ಸಂದರ್ಭದಲ್ಲಿ ಉಮೇಶ್ ನಾಯಕ್‌ರವರಿಗೆ ಗೌರವಾರ್ಪಣೆ ನಡೆಯಲಿದೆ. ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹೋಬಳಿ ಘಟಕದ ಅಧ್ಯಕ್ಷ ಕಡಮಜಲು ಸುಭಾಷ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













