ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂಬೈ ಕೇಂದ್ರ ಕಚೇರಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ಸತೀಶ್ ರೈ ಕುತ್ಯಾಡಿ

0

ಪುತ್ತೂರು: ಸತೀಶ್ ರೈ ಕುತ್ಯಾಡಿ ಅವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ ಕೇಂದ್ರ ಕಚೇರಿಯಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ.


ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸತೀಶ್ ರೈ ಕುತ್ಯಾಡಿಯವರು ದೇಶಕ್ಕೆ ಕೀರ್ತಿ ತಂದಿದ್ದು ಕ್ರೀಡಾ ಜಗತ್ತಿನ ಅತ್ಯುನ್ನತ ಪ್ರಶಸ್ತಿಗಳಲ್ಲೊಂದಾದ ಅರ್ಜುನ ಪ್ರಶಸ್ತಿ ಪುರಸ್ಕೃತಗೊಂಡಿದ್ದರು. ಇವರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.
ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಮುಂಬೈ, ಹೈದರಾಬಾದ್, ಕೋಲ್ಕತ್ತಾ, ಬೆಂಗಳೂರು ಮತ್ತು ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿ ಬ್ಯಾಂಕಿನ ಪ್ರಗತಿಗೆ ಕೊಡುಗೆ ನೀಡಿದ್ದಾರೆ.

ಕ್ರೀಡೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಇವರು ಇದೀಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಮಟ್ಟದ ಅಧಿಕಾರಿಯಾಗಿ ಸ್ಥಾನ ಅಲಂಕರಿಸಿದ್ದಾರೆ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಾಪೆಮಜಲು ಮತ್ತು ಮಾಧ್ಯಮಿಕ ಶಿಕ್ಷಣವನ್ನು ಕುಂಬ್ರದ ಸರ್ಕಾರಿ ಶಾಲೆಯಲ್ಲಿ ಪೂರೈಸಿದರು. ನಂತರ ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಶಿಕ್ಷಣ ಮುಂದುವರಿಸಿದ ಇವರು, ವಿವೇಕಾನಂದ ಕಾಲೇಜಿನಿಂದ ಬಿ.ಕಾಂ ಪದವಿ ಪಡೆದಿದ್ದರು. ಇವರು ಅರಿಯಡ್ಕ ಗ್ರಾಮದ ಕುತ್ಯಾಡಿ ದಿ. ಚಿಕ್ಕಪ್ಪ ರೈ ಮತ್ತು ಚಂದ್ರಾವತಿಯರ ಪುತ್ರ.

LEAVE A REPLY

Please enter your comment!
Please enter your name here