







ಪುತ್ತೂರು: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನುಮಗಿರಿಯ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಾಕ್ಷಿಯಾಗಲಿದ್ದಾರೆ.


ಏಪ್ರಿಲ್ 9ರಿಂದ 12ರ ತನಕ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಜರುಗಲಿದ್ದು, ಏಪ್ರಿಲ್ 10ರಂದು ರಾಜ್ಯಪಾಲರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.



ಈಗಾಗಲೇ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಅಭೂತಪೂರ್ವ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು, ಗಣ್ಯರು, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಭಕ್ತ ಸಾಗರವೇ ಹರಿದುಬರುವ ನಿರೀಕ್ಷೆಯಿದೆ.










