






ಪುತ್ತೂರು: ಎ.19ರಂದು ವಿಟ್ಲದಲ್ಲಿ ನಡೆಯುವ ಜಿಲ್ಲಾಮಟ್ಟದ ಡಾ| ಬಿ.ಆರ್ ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆಯ ಪ್ರಯುಕ್ತ ಎ.5ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ಸುಳ್ಯ, ಕಡಬ ಹಾಗೂ ಪುತ್ತೂರು ತಾಲೂಕಿನ ಪ.ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ನಡೆಸಲಾಯಿತು.


ಮುಗೇರ ಸಂಘದ ಅಧ್ಯಕ್ಷ ಸುಂದರ ಕೇಪುಳು ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಪುತ್ತೂರು ತಾಲೂಕು ಅಧ್ಯಕ್ಷ ಬಿ.ಕೆ ಅಣ್ಣಪ್ಪ ಕಾರೆಕ್ಕಾಡು ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ನಲಿಕೆಯವರ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷ ಶ್ರೀಧರ್ ಪೆರ್ಲಂಪಾಡಿ ಹಾಗೂ ದಲಿತ್ ಸೇವಾ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ಲೋಕೇಶ್ ತೆಂಕಿಲ, ಜಯಶ್ರೀ ಕಡಬ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ನಾರಾಯಣ ಕಾವು, ದಿನೇಶ್ ಕೋಡೆಂಚಿಕಾರ್ ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂರಾರು ಮಕ್ಕಳು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರತೀಕ್ಷಾ ಬೆದ್ರಕಾಡು ಕ್ರಾಂತಿ ಗೀತೆಯನ್ನು ಹಾಡಿದರು. ಂದ್ಯಾ ಕಡಬ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಪ್ರಸಾದ್ ಬೋಳ್ವಾರ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಯು ವಿಟ್ಲ ವಂದಿಸಿದರು.













