







ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು ರಾಮಕುಂಜ ಇಲ್ಲಿ ನಡೆದ ‘ಮನೆಯಂಗಳ ನೆನಪುಗಳ ಬುತ್ತಿ’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏ.6ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು ಕಳೆದ 30 ವರ್ಷಗಳಿಂದ ಬೇಸಿಗೆ ಶಿಬಿರವನ್ನು ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳೆಲ್ಲರೂ ಈ ಶಿಬಿರದ ಪ್ರಯೋಜನವನ್ನು ಪಡೆದು ಈ ಮನೆಯಂಗಳ ನೆನಪಿನ ಬುತ್ತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗಿರೀಶ್ ಎ.ಪಿ.ಅವರು ಮಾತನಾಡಿ, ದೇವರು ಎಲ್ಲರಿಗೂ ಪ್ರತಿಭೆಯನ್ನು ಕೊಟ್ಟಿರುತ್ತಾರೆ. ಪ್ರತಿಭೆಗಳು ಜೀವನಕ್ಕೆ ದಾರಿ ದೀಪವಾಗುತ್ತದೆ. ಇಂತಹ ಶಿಬಿರಗಳು ಹಾಗೂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹಾಕಲು ಅವಕಾಶ ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಉಪಯೋಗಿಸಿಕೊಂಡಾಗ ತಮ್ಮಲ್ಲಿರುವ ಶಕ್ತಿ ಏನೆಂಬುದು ಅರಿವಾಗುತ್ತದೆ ಎಂದರು.



ಸಂಸ್ಥೆಯ ಆಡಳಿತ ಅಧಿಕಾರಿ ಆನಂದ ಎಸ್.ಟಿ., ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಪ್ರಾಂಶುಪಾಲ ಪ್ರವೀದ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ಎ.ವಂದಿಸಿದರು. ಸಹಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ಶಿಬಿರ ಸಂಘಟಕ ರಾಧಾಕೃ? ಬಿ., ಸರಿತಾ, ಶಿಕ್ಷಕ ಶಿಕ್ಷಕೇತರ ವೃಂದ, ನಿಲಯ ಪಾಲಕರು, ವಿದ್ಯಾರ್ಥಿಗಳು ಸಹಕರಿಸಿದರು.










