ಎ.10:ಲಯನ್ಸ್ ಕಾವುನಿಂದ ಉಚಿತ ನೇತ್ರ, ರಕ್ತದೊತ್ತಡ, ಮಧುಮೇಹ ತಪಾಸಣೆ, ಪ್ರಥಮ ಚಿಕಿತ್ಸೆ ತರಬೇತಿ, ಗಣಕಯಂತ್ರ, ಪೀಠೋಪಕರಣ ಹಸ್ತಾಂತರ

0

ಪುತ್ತೂರು: ಅಂತರರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಡಿ, ರೀಜ್ಹನ್ 7, ವಲಯ ಎರಡರ ಲಯನ್ಸ್ ಕ್ಲಬ್ ಪುತ್ತೂರು ಕಾವು ವತಿಯಿಂದ, ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ, ವಿ ಕೇರ್ ಹೆಲ್ತ್ ಮತ್ತು ಐ ಸೆಂಟರ್ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ, ರಕ್ತದೊತ್ತಡ, ಮಧುಮೇಹ ತಪಾಸಣೆ, ಪುತ್ತೂರು ಕೆಎಂಸಿ ತುರ್ತು ವಿಭಾಗದ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಹಾಗೂ ಗಣಕಯಂತ್ರ ಮತ್ತು ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಎ.10 ರಂದು ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.


ಲಯನ್ಸ್ ಜಿಲ್ಲೆ 317 ಇದರ ಕಾವು ಹೇಮನಾಥ ಶೆಟ್ಟಿರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಪುತ್ತೂರು ಕಾವು ಅಧ್ಯಕ್ಷ ಕೆ.ಇಬ್ರಾಹಿಂ ಹಾಜಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲಯನ್ಸ್ ಪ್ರಾಂತ್ಯ 7, ವಲಯ ಎರಡರ ವಲಯ ಅಧ್ಯಕ್ಷ ಜಗನ್ನಾಥ ರೈ ಗುತ್ತು, ವಲಯ ಪ್ರತಿನಿಧಿ ರಮೇಶ್ ರೈ ಸಾಂತ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ ಹೇಮನಾಥ ಶೆಟ್ಟಿ, ಕಾವು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಕಾವು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಿ.ಎಚ್ ಅಬ್ದುಲ್ ಅಜೀಜ್ ಹಾಜಿ, ಕಾವು ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಪಾವನರಾಮ, ಕಾವು ಸರಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ತಾರಾನಾಥ್ ಎನ್.ಸಿರವರು ಭಾಗವಹಿಸಲಿದ್ದಾರೆ ಎಂದು ಲಯನ್ಸ್ ಕ್ಲಬ್ ಪುತ್ತೂರು ಕಾವು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾವು ಸರಕಾರಿ ಪ್ರಾಥಮಿಕ ಶಾಲೆಯ ಶಾಲಾಭಿವೃಧ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಕಾವು ಸರಕಾರಿ ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕ ವೃಂದದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here