ವಿವೇಕಾನಂದ ಕಾಲೇಜಿನ ಉಪನ್ಯಾಸಕಿ ಕವಿತಾ ಅವರಿಗೆ ಡಾಕ್ಟರೇಟ್ ಪದವಿ

0

ಪುತ್ತೂರು; ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ರಾಜಕೀಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಕವಿತಾ ಅವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ “Topic : “Agricultural policies – social response and it’s implications in Karnataka – A Case Study Of Endosulfan In Dakshina Kannada ” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.


ಇವರು ಮಂಗಳೂರು ವಿಶ್ವವಿದ್ಯಾನಿಲಯದ ರಾಜಕೀಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ದಯಾನಂದ ನಾಯಕ್ ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮಂಡಿಸಿರುತ್ತಾರೆ.


ಇವರು ಸುಮಾರು 17ವರ್ಷಗಳಿಂದ ರಾಜ್ಯ ಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ಕೊರಗಪ್ಪ ಮತ್ತು ವೆಂಕಮ್ಮ ದಂಪತಿಯ ಪುತ್ರಿಯಾಗಿದ್ದು ಮಂಗಳೂರಿನ ಶೈಲೇಶ್ ಕದ್ರಿ ಇವರ ಪತ್ನಿ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here