ಪಿಯುಸಿ; ವಾಣಿಜ್ಯ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ

0

ರಾಮಕುಂಜ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ವಾಣಿಜ್ಯ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ.


ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 133 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಲಭಿಸಿದೆ. ಇದರಲ್ಲಿ 48 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 73 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅನುಶ್ರೀ ಉಡುಪ 589, ಡಿ.ಎಲ್.ಮಧುರ 587, ಲಯಶ್ರೀ 585, ನಿತೀಶ 585, ಗೌತಮ್ 585 ಅಂಕ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗಕ್ಕೆ ಶೇ.96.96 ಹಾಗೂ ಕಲಾ ವಿಭಾಗಕ್ಕೆ ಶೇ.93.10 ತೇರ್ಗಡೆ ಫಲಿತಾಂಶ ಲಭಿಸಿದೆ.

LEAVE A REPLY

Please enter your comment!
Please enter your name here