







ಉಪ್ಪಿನಂಗಡಿ; ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ, ಉಪ್ಪಿನಂಗಡಿಯ ಅದಿತಿ ಆರ್.ರೈ ಅವರ 581(ಶೇ.96.83)ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.


ಇವರು ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದಿದ್ದು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.96 ಅಂಕ ಪಡೆದುಕೊಂಡಿದ್ದರು. ಈಕೆ ಉಪ್ಪಿನಂಗಡಿ ರಾಮನಗರ ನಿವಾಸಿ ರಾಮಣ್ಣ ರೈ ಮತ್ತು ಉಮಾವತಿ ಕೆ.ದಂಪತಿ ಪುತ್ರಿ













