






ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೆಯ್ಯೂರು ಗ್ರಾಮದ ಎರಕ್ಕಳದಿಂದ ವರದಿಯಾಗಿದೆ.


ಎರಕ್ಕಲ ನಿವಾಸಿ ದೇಜಮ್ಮರವರ ಪುತ್ರ ಶೇಖರ ಗೌಡ(45.ವ) ಎಂಬವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಎ.14 ರಂದು ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













