







ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಭಾರ ಶಾಖಾ ವ್ಯವಸ್ಥಾಪಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.


ಬ್ಯಾಂಕ್ನ ಅಧ್ಯಕ್ಷರಾದ ಪುಷ್ಪರಾಜ್ ಚೌಟ, ಮುಖ್ಯಕಾರ್ಯನಿರ್ವಹಣಾಧಿಕಾರಿ ಯಶೋಧ, ಶಾಖಾ ವ್ಯವಸ್ಥಾಪಕ ಯತೀಶ್ ಡಿ.ಗೌಡ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 88/2026 ರಂತೆ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು.



ಪ್ರಕರಣದ ತನಿಖೆ ಹಾಗೂ ಮುಂದಿನ ವಿಚಾರಣೆಗೆ ಸಂಬಂಧಿಸಿ ಪ್ರಕರಣದ ಆರೋಪಿಗಳು ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದುಮಾಡುವಂತೆ ಹೈಕೋರ್ಟು ರಿಟ್ ಪಿಟಿಷನ್ ಸಲ್ಲಿಸಿದ್ದರು. ಪ್ರಸ್ತುತ ಹೈಕೋರ್ಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮಾಣಿ ಶಾಖಾ ಸಿಬ್ಬಂದಿ ನೆಟ್ಟ ಮುತ್ತೂರು ನಿವಾಸಿ ಸೇಸಮ್ಮ (47 ವ.)ರವರು ಪ್ರಕರಣದ ದೂರುದಾರರಾಗಿದ್ದಾರೆ. ನೇರಳಕಟ್ಟೆ ಸಹಕಾರ ಸಂಘದ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು.










