






ಪುತ್ತೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಶೇ.85 ಫಲಿತಾಂಶ ಪಡೆದುಕೊಂಡಿದ್ದು ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ. ಕಾಲೇಜಿನ ಒಟ್ಟು 42 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.


ವಿಜ್ಞಾನ ವಿಭಾಗದಿಂದ ಹಾಜರಾದ 8 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪ್ರಣಮ್ 521 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶ್ರೀಕೃಪ ಕೆ. 506 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಒಬ್ಬ ವಿದ್ಯಾರ್ಥಿಯು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.













