ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ವಿಟ್ಲ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಅಧಿಕಾರಿಗಳ ಸಹಕಾರದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮೋಹನ ಮತ್ತು ವೆಂಕಪ್ಪ ದಸ್ತಗಿರಿ ಮಾಡಿ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here