






ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ನನ್ಯ ಸಮೀಪದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ಭಾಗವಾಗಿ ಸಂಚರಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಏ.18ರ ತಡರಾತ್ರಿ ನಡೆದಿದೆ.


ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಚಾಲಕನಿಗೆ ತೀವ್ರತರವಾದ ಗಾಯವಾಗಿದೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.













