ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ – ಎಪ್ರಿಲ್ 21ರಂದು ಪೂರ್ವಭಾವಿ ಸಭೆ

0

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ಸಮರ್ಪಿಸಲಾಗುವ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಪ್ರಿಲ್ 21ರಂದು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಸಂಜೆ 3 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.

ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ.


ಮೇ.6ರಂದು ಸಂಜೆ ಜಗದ್ಗುರುಗಳು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದು, ಮೇ.7ರಂದು ಸಾರ್ವಜನಿಕ ಅಭಿವಂದನಾ ಕಾರ್ಯಕ್ರಮ ಜರಗಲಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಗುರುವಂದನಾ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಇಡಿಯ ಪುತ್ತೂರಿಗರ ವತಿಯಿಂದ ಜಗದ್ಗುರುಗಳ ವಂದನೆಗೆ ಭರದ ಸಿದ್ಧತೆ ನಡೆಯುತ್ತಿದೆ. ಹಿಂದೂ ಸಮಾಜದ ಸಮಸ್ತ ಸಮುದಾಯಗಳನ್ನೊಳಗೊಂಡ ಗುರುವಂದನಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

LEAVE A REPLY

Please enter your comment!
Please enter your name here