ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಕೊಡುಗೆಗೆ ಭರ್ಜರಿ ರೆಸ್ಪಾನ್ಸ್ – ಇಂದೂ ಕೂಡ ನಡೆಯಲಿದೆ ಆಫರ್

0

ಪುತ್ತೂರು: ಆಭರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಯು ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸಂಸ್ಥೆಯ ಪುತ್ತೂರು, ಮೂಡುಬಿದಿರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದ್ದು, ಹಬ್ಬದ ಸಂಭ್ರಮದಲ್ಲಿ ಅನೇಕ ಗ್ರಾಹಕರು ಚಿನ್ನ ಮತ್ತು ಬೆಳ್ಳಿ ಆಭರಣಗಳ ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿದೆ. ವಿಶೇಷವಾಗಿ ಅಕ್ಷಯ ತೃತೀಯದ ದಿನವನ್ನು ಶುಭಕರವಾಗಿ ಪರಿಗಣಿಸುವ ಗ್ರಾಹಕರು ಆಭರಣಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡಿದರು.

ಈ ವಿಶೇಷ ರಿಯಾಯಿತಿ ಕೊಡುಗೆಗಳು ಏಪ್ರಿಲ್ 20ರವರೆಗೆ ಮುಂದುವರಿಯಲಿದ್ದು, ಇನ್ನೂ ಹೆಚ್ಚಿನ ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here