







ಪುತ್ತೂರು: 2026ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ರವಾನಿಸಿದೆ.


ಫಲಿತಾಂಶವನ್ನು ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮತ್ತು ಮೊಬೈಲ್ ಆಪ್ ‘KarnatakaOne’ ಮೂಲಕವೂ ಪಡೆಯಬಹುದಾಗಿದೆ.ಅಲ್ಲದೇ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ಲಭ್ಯವಾಗಲಿದೆ ಎಂದು ಮಂಡಳಿ ತಿಳಿಸಿದೆ.



ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 94.1% ಪಾಸಾಗಿದ್ದಾರೆ. ಪರೀಕ್ಷೆ ಬರೆದ 7 ಲಕ್ಷದ 70 ಸಾವಿರದ 209 ವಿದ್ಯಾರ್ಥಿಗಳ ಪೈಕಿ 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ ದ್ವಿತೀಯ ಸ್ಥಾನ ಮತ್ತು ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದಿದೆ. ಕಲಬುರಗಿ ಕೊನೆಯ ಸ್ಥಾನ ಪಡೆದಿದೆ.ಮೂವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ ಸಾಧನೆ ಮಾಡಿದ್ದಾರೆ.
ಡಿಜಿಲಾಕರ್ನಿಂದ ಅಂಕಪಟ್ಟಿ ಡೌನ್ಲೋಡ್:
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ವೆಬ್ಸೈಟ್ https://www.digilocker.gov.in ಗೆ ಭೇಟಿ ನೀಡಬಹುದಾಗಿದೆ.










