







ನೆಲ್ಯಾಡಿ: 2025-26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಸಂತಜಾರ್ಜ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.



ಪರೀಕ್ಷೆಗೆ ಹಾಜರಾದ ಎಲ್ಲಾ 53 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಮೂರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಫಾತಿಮತ್ ಇಬ 583, ಐಶ್ವರ್ಯ ಗೌಡ 676, ಯಶ್ಮಿತ ಬಿ.ಕೆ. 574, ಕಾವ್ಯಶ್ರೀ 573, ಧನುಷ 543, ಜ್ಯೋತಿ ಎಚ್.ಬಿ. 537, ಕೃತಿಕಾ 537, ಮುಫೀದಾ 536, ಶ್ರೇಯಾ ಸಿ.ಹೆಚ್. 533ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ.












