






ವಿಟ್ಲ : 2025-26 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ ಲಭಿಸಿದೆ.


ಜನನಿ ಎಸ್ 618ಅಂಕ ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ. ಫಾತಿಮಾ ಅಸ್ನ 614 ಅಂಕ ಪಡೆದು ದ್ವಿತೀಯ ಸ್ಥಾನಿಯಾಗಿದ್ದಾರೆ. ಸಂಹಿತಾ ಎನ್. 609 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾರೆ. ಒಟ್ಟು 114 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇವರಲ್ಲಿ 52 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.













