ಪೆರ್ನೆಯಲ್ಲಿ ಗೋ ಕಳ್ಳತನ ವಿರುದ್ಧ ಪ್ರತಿಭಟನೆ ನಡೆಸಿದ್ದ ಪ್ರಕರಣ : ಹಿಂ.ಜಾ.ವೇ. ಮುಖಂಡ ನರಸಿಂಹ ಮಾಣಿ ವಿರುದ್ಧದ ಕೇಸಿಗೆ ಹೈಕೋರ್ಟ್ ತಡೆ

0

ಪುತ್ತೂರು: ಪೆರ್ನೆಯಲ್ಲಿ ನಡೆದ ಗೋ ಕಳ್ಳತನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಪೊಲೀಸರ ಕರ್ತವ್ಯವನ್ನು ಪ್ರಶ್ನಿಸಿದ್ದ ಕಾರಣಕ್ಕೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಏನಿದು ಪ್ರಕರಣ?:
ಪೆರ್ನೆಯಲ್ಲಿ ನಡೆದ ಗೋ ಕಳ್ಳತನ ಪ್ರಕರಣವನ್ನು ಖಂಡಿಸಿ ನರಸಿಂಹ ಮಾಣಿ ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿ ನಡೆಸಲಾಗಿತ್ತು. ಈ ವೇಳೆ ಅವರು ಮಾಡಿದ ಭಾಷಣ ಹಾಗೂ ಪೊಲೀಸರ ಕಾರ್ಯ ವೈಖರಿಯನ್ನು ಪ್ರಶ್ನಿಸಿದ್ದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಅಕ್ರಮ ಬಂಧನ ಆರೋಪ:
ಪ್ರಕರಣ ದಾಖಲಾದ ದಿನವೇ ನರಸಿಂಹ ಮಾಣಿ ಮೈಸೂರಿನಲ್ಲಿ ನಡೆಯುತ್ತಿರುವ ಹಿಂದೂ ಸಂಘಟನೆಯ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ರಾತ್ರಿ 9 ಗಂಟೆಗೆ ಸುಳ್ಯದಲ್ಲಿ ಯಾವುದೇ ನೋಟಿಸ್ ನೀಡದೇ ಅವರನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಹಿರಿಯ ವಕೀಲರಾದ ರಾಜೇಶ್ ಬೊಳ್ಳುಕಲ್ಲು ಮತ್ತು ಸುರೇಶ್ ಪೂಜಾರಿ ಅವರು ತುರ್ತಾಗಿ ಮಧ್ಯ ಪ್ರವೇಶಿಸಿ ಯಾವುದೇ ಜಾಮೀನು ಪ್ರಕ್ರಿಯೆ ಇಲ್ಲದೆಯೇ ನರಸಿಂಹ ಮಾಣಿಯವರನ್ನು ಬಿಡುಗಡೆಗೊಳಿಸಿದ್ದರು.

ಹೈಕೋರ್ಟ್ ಗೆ ಅರ್ಜಿ:
ನರಸಿಂಹ ಮಾಣಿ ಅವರ ವಿರುದ್ಧ ಪೊಲೀಸರು ಕೇಸು ದಾಖಲಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿದ್ದಾರೆ. ನರಸಿಂಹ ಮಾಣಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಪುತ್ತೂರು ವಾದಿಸಿದ್ದರು. ಯುವ ನ್ಯಾಯವಾದಿ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.

LEAVE A REPLY

Please enter your comment!
Please enter your name here