ಮೇ.1: ನೆಲ್ಯಾಡಿಯಲ್ಲಿ ಜೇಸಿಐ ನೇತೃತ್ವದಲ್ಲಿ ರಕ್ತದಾನ ಶಿಬಿರ

0

ನೆಲ್ಯಾಡಿ: ಜೇಸಿಐ ನೆಲ್ಯಾಡಿ ಇದರ ವತಿಯಿಂದ ಮಂಗಳೂರು ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಆಶ್ರಯದಲ್ಲಿ ನೆಲ್ಯಾಡಿಯ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ರಕ್ತದಾನ ಶಿಬಿರ ಮೇ.1ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ತನಕ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ ಎಂದು ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಪ್ರವೀಣಿ ಸುಧಾಕರ ಶೆಟ್ಟಿ ತಿಳಿಸಿದ್ದಾರೆ.


ಶಿಬಿರವನ್ನು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಅವರು ಉದ್ಘಾಟಿಸಲಿದ್ದಾರೆ. ಮಂಗಳೂರು ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ವೈದ್ಯಾಧಿಕಾರಿ ಡಾ.ಶರತ್‌ಕುಮಾರ್ ರಾವ್ ಜೆ., ಜೆಸಿಐನ ಪ್ರದೀಪ್ ಕುಮಾರ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಕ್ತದಾನ ಮಾಡುವ ಆಸಕ್ತರು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here