ಕದಿಕ್ಕಾರು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ : ಎ.29ರಿಂದ ಮೇ 3ರವರೆಗೆ ಪುನರ್ ಪ್ರತಿಷ್ಠಾ ಮಹೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಗಾಂಧೀಪಾರ್ಕ್ ಎಂಬಲ್ಲಿ ಹೆದ್ದಾರಿ ಪಾರ್ಶ್ವದಲ್ಲಿ ಪುನರ್ ನಿರ್ಮಿತ ಕದಿಕ್ಕಾರು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತೀ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವವು ಎ.29ರಿಂದ ಮೇ.3ರವರೆಗೆ ನಡೆಯಲಿದೆ.


ಎ.29ರಂದು ಸಂಜೆ 4ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಚಂದ್ರನಾಥ ಸ್ವಾಮಿ ಸಭಾ ವೇದಿಕೆಯಲ್ಲಿ ಪರಮಪೂಜ್ಯ 108 ಶ್ರೀ ವೀರಸಾಗರ ಮುನಿ ಮಹಾರಾಜರಿಂದ ಮಂಗಲ ಪ್ರವಚನ ನಡೆಯಲಿದೆ. ಹೊಂಬುಜ ಅತಿಶಯ ಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ತೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಹಾಗೂ ಕಂಬದಹಳ್ಳಿ ಶ್ರೀ ಕ್ಷೇತ್ರದ ಪರಮಪೂಜ್ಯ ಸ್ವಸ್ತಿಶ್ತೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಆಶೀರ್ವಚನ ನೀಡಲಿದ್ದಾರೆ. ಈ ಸಂದರ್ಭ ಪದ್ಮನಾಭ ಚಕ್ರವರ್ತಿ ಉಪ್ಪಿನಂಗಡಿ ಹಾಗೂ ವಜ್ರಕುಮಾರ್ ಇಂದ್ರ ಉಪ್ಪಿನಂಗಡಿ ಉಪಸ್ಥಿತಿ ಇರಲಿದ್ದಾರೆ.
ಎ.30ರಂದು ಸಂಜೆ 4:30ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಪರಮಪೂಜ್ಯ 108 ಶ್ರೀ ವೀರಸಾಗರ ಮುನಿ ಮಹಾರಾಜರು ಮಂಗಲ ಪ್ರವಚನ ನೀಡಲಿದ್ದಾರೆ. ಕಾರ್ಕಳ ಜೈನ ಮಠದ ಪರಮಪೂಜ್ಯ ಜಗದ್ಗುರು ರಾಜಗುರು ಧ್ಯಾನಯೋಗಿ ಸ್ವಸ್ತಿಶ್ತೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತಿ ಇರಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಂಜೆ 6-30ರಿಂದ ಅನಂತ ಮತಿ ಚರಿತೆ ಪ್ರಸಂಗದ ಯಕ್ಷಕಾವ್ಯ ವಾಚನ-ಪ್ರವಚನ ನಡೆಯಲಿದೆ.


ಮೇ 1ರಂದು ಸಂಜೆ 6ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಕಾರ್ಕಳ ಜೈನ ಮಠದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ತೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲನೆಗೈಯಲಿದ್ದಾರೆ. ವಜ್ರಕುಮಾರ್ ಜೈನ್ ಪದ್ಮವಿದ್ಯಾ ಉಪ್ಪಿನಂಗಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ 7-30ರಿಂದ ಶ್ರೀಮತಿ ಸುಖದಾ ಭರ್ವೆ ಮೂಡಬಿದ್ರೆ ಬಳಗದಿಂದ ನ್ಯಾಟ್ಯಾಂಜಲಿ ನಡೆಯಲಿದೆ.


ಮೇ 2ರಂದು ಸಂಜೆ 6ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಕ್ಷೇತ್ರ ಶ್ರವಣಬೆಳಗೋಳದ ದಿಗಂಬರ ಜೈನ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ತೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ದೀಪಪ್ರಜ್ವಲನೆಗೈಯಲಿದ್ದಾರೆ. ಕದಿಕ್ಕಾರು ಭಗವಾನ್ ಚಂದ್ರನಾಥ ಸ್ವಾಮಿ ಸೇವಾ ಟ್ರಸ್ಟ್ನ ಉಪಾಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಂಜೆ 6-30ರಿಂದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.


ಮೇ 3ರಂದು 6-30ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಮೂಡಬಿದ್ರೆ ಶ್ರೀ ಜೈನ ಮಠದ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಭಟ್ಟಾರಕ ಡಾ| ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಯವರು ಹಾಗೂ ನರಸಿಂಹರಾಜಪುರದ ಅತಿಶಯಕ್ಷೇತ್ರ ಸಿಂಹನಗದ್ದೆ ಬಸ್ತಿ ಮಠದ ಪರಮಪೂಜ್ಯ ಸ್ವಸ್ತಿಶ್ತೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ಅಳದಂಗಡಿ ಅರಮಣೆಯ ತಿಮ್ಮಣ್ಣರಸರಾದ ಡಾ. ಪದ್ಮರಾಜ ಅಜಿಲರು ದೀಪ ಪ್ರಜ್ವಲನೆಗೈಯಲಿದ್ದಾರೆ. ಕದಿಕ್ಕಾರು ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿದ್ಯಾಧರ ಜೈನ್ ಪದ್ಮವಿದ್ಯಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ ಗಂಟೆ 8.00ರಿಂದ ಸಿತಾರ್ ಕೊಳಲು ಜುಗಲ್ ಬಂದಿ ‘ಸುರ್ ಸಾಗರ್” ನಡೆಯಲಿದೆ.


ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯ ಕಾರಣಕ್ಕೆ ಬಸದಿಯ ಹಳೆ ಕಟ್ಟಡವನ್ನು ತೆರವುಗೊಳಿಸಲಾಗಿದ್ದು, ಬಸದಿಯ ಪುರೋಹಿತ ಮನೆತನದವರು ಸ್ಥಳದಾನ ಮಾಡಿಕೊಟ್ಟ ಭೂಮಿಯಲ್ಲಿ ನೂತನ ಬಸದಿಯನ್ನು ಪುನರ್ ನಿರ್ಮಿಸಲಾಗಿದೆ. ಅಂದಾಜು ಸುಮಾರು 1.5 ಕೋಟಿ ರೂ. ವೆಚ್ಚದ ಈ ಕಾಮಗಾರಿಯಲ್ಲಿ ಬಸದಿ, ಗೋಪುರ, ಆವರಣಗೋಡೆ , ಏಕಶಿಲಾ ಚತುರ್ಮುಖ ಮಾನಸ್ತಂಭ , ಬಾವಿಗಳನ್ನು ನಿರ್ಮಿಸಲಾಗಿದೆ. ಬಸದಿಯಲ್ಲಿ ಬಿಳಿ ಅಮೃತಶಿಲಾ ಕೆತ್ತನೆಗಳನ್ನು , ಜೈನ ಪರಂಪರೆಯ ಇತಿಹಾಸವನ್ನು ಸಾರುವ ಆಕರ್ಷಕ ಕೆತ್ತನೆಗಳನ್ನು ರಾಜಸ್ಥಾನದ ಶಿಲ್ಪಿಗಳಿಂದ ರಚಿಸಲಾಗಿದೆ.

LEAVE A REPLY

Please enter your comment!
Please enter your name here