







ಪುತ್ತೂರು : ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ, ಕಾಣಿಯೂರು ನಿವಾಸಿ, ಮಾಧವ ಗೌಡ ಕಾಣಿಯೂರು(50.ವ) ಅವರು ಏ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.


ಮೃತರು ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.













