ಗಂಡಿಬಾಗಿಲು ಶಾಲಾ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿಪೂಜೆ

0

ರಾಮಕುಂಜ: ಕಡಬ ತಾಲೂಕಿನ ಕೊಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್.ಪಿ.ಎಲ್‌ನ ಸಿಎಸ್‌ಆರ್ ನಿಧಿಯ 10 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣವಾಗಲಿರುವ ಸುಸಜ್ಜಿತ ಶೌಚಾಲಯ ಕಟ್ಟಡಕ್ಕೆ ಗುದ್ದಲಿಪೂಜೆ ನಡೆಯಿತು.


ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ ನೆರವೇರಿಸಿ ಶುಭ ಹಾರೈಸಿದರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪ್ರಮುಖರಾದ ರವಿಪ್ರಸಾದ್ ಶೆಟ್ಟಿ, ಪ್ರದೀಪ್ ರೈ ಮನವಳಿಕೆ, ಶೀನಪ್ಪ ಗೌಡ ವಳಕಡಮ, ಬಾಲಕೃಷ್ಣ ಗೌಡ ಬೇಂಗದಪಡ್ಪು, ಸೀತಾರಾಮ ಗೌಡ ವಳಕಡಮ, ಲಕ್ಷ್ಮಿನಾರಾಯಣ ರಾವ್ ಆತೂರು, ವಿನಯ ರೈ ಕೊಲಪಟ್ಟೆ, ಕಮಲಾಕ್ಷಿ, ಶಾಲಾ ಶಿಕ್ಷಕರು, ಎಸ್‌ಡಿಎಮ್‌ಸಿ ಅಧ್ಯಕ್ಷರು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ತುಳಸಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here