ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ ನಿವಾಸಕ್ಕೆ ಕೇರಳ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ವಿಧಾನಸಭಾ ಅಭ್ಯರ್ಥಿ ಸುರೇಂದ್ರನ್ ಭೇಟಿ

0

ಪುತ್ತೂರು: ಕೇರಳ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಸುರೇಂದ್ರನ್ ಮೇ.1ಕ್ಕೆ ಪುತ್ತೂರಿಗೆ ಆಗಮಿಸಿದ ಅವರು ಸಂಪ್ಯದಲ್ಲಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರ ನಿವಾಸಕ್ಕೆ ಭೇಟಿ ನೀಡಿದರು.


ಪ್ರಸನ್ನ ಕುಮಾರ್ ಮಾರ್ತ ಅವರ ಪತ್ನಿ ಸುರೇಂದ್ರನ್ ಅವರನ್ನು ಸ್ವಾಗತಿಸಿ, ಸನ್ಮಾನಿಸಿದರು. ಬಳಿಕ ಅವರು ಉಪಾಹಾರ ಸೇವಿಸಿ ಅಲ್ಲಿಂದ ತೆರಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸುರೇಂದ್ರನ್ ಅವರು, ಕೇರಳ ಬಿಜೆಪಿಗೆ ಬಹಳಷ್ಟು ಕಷ್ಟದ ರಾಜ್ಯ. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಶೇ.30ಮತ ಬಿಜೆಪಿಗೆ ಬಂದಿದ್ದು ತ್ರಿಶೂರ್ ಲೋಕ ಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಅದಕ್ಕಿಂತಲೂ ಉತ್ತಮವಾಗಿದ್ದು ಡಬ್ಬಲ್ ಡಿಜಿಟ್ ಸಂಖ್ಯೆಯಲ್ಲಿ ಬಿಜೆಪಿ ಕೇರಳದಲ್ಲಿ ಗೆಲುವು ಸಾಧಿಸಲಿದೆ. ಹಿಂದುತ್ವ ನಮ್ಮ ಮೂಲ ಸಿದ್ದಾಂತ. ಅದರಲ್ಲಿ ಬದಲಾವಣೆಯಿಲ್ಲ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಕಾರ್ಯದರ್ಶಿ ಮಣಿಕಂಠ, ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ವಿರೂಪಾಕ್ಷ ಭಟ್, ಟೌನ್ ಬ್ಯಾಂಕ್ ಉಪಾಧ್ಯಕ್ಷ ಶ್ರೀಧರ ಗೌಡ ಕಣಜಾಲು, ದ.ಕ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಹ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ವಿನಯ ಕಂದಡ್ಕ, ಚಂದ್ರಶೇಖರ ರಾವ್ ಬಪ್ಪಳಿಗೆ, ರಫೀಕ್ ದರ್ಬೆ, ಲೋಕೇಶ್ ಹೆಗ್ಡೆ, ಮನೋಹರ್ ಕಲ್ಲಾರೆ, ವಸಂತ ಲಕ್ಷ್ಮೀ, ಗೌರಿ ಬನ್ನೂರು, ವಿಮಲ ಸುರೇಶ್, ಶಶಿಕಲಾ ಸಿ.ಎಸ್. ಸಹಿತ ಹಲವು ಮಂದಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here