ನೆಲ್ಯಾಡಿ ಜೇಸಿಐ ನೇತೃತ್ವದಲ್ಲಿ ರಕ್ತದಾನ ಶಿಬಿರ

0

ನೆಲ್ಯಾಡಿ: ಜೇಸಿಐ ನೆಲ್ಯಾಡಿ ಇದರ ವತಿಯಿಂದ ಪ್ರಾದೇಶಿಕ ರಕ್ತಪೂರಣ ಕೇಂದ್ರ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಆಶ್ರಯದಲ್ಲಿ ಲಹರಿ ಸಂಗೀತ ಕಲಾ ಕೇಂದ್ರ ಐಐಸಿಟಿ ನೆಲ್ಯಾಡಿ, ಧರ್ಮಶ್ರೀ ಮಹಿಳಾ ಮತ್ತು ಮಕ್ಕಳ ಭಜನಾ ಮಂಡಳಿ ಕೌಕ್ರಾಡಿ, ಹೊಸಮಜಲು ಅಶ್ವತ್ಥ ಗೆಳೆಯರ ಬಳಗ, ಮಹಾವಿಷ್ಣು ಗೆಳೆಯರ ಬಳಗ ಅಮುಂಜ ಪಡುಬೆಟ್ಟು, ಆಟೋರಿಕ್ಷಾ ಚಾಲಕ-ಮಾಲಕರು ನೆಲ್ಯಾಡಿ, ಎನ್‌ಎಸ್‌ಎಸ್ ಘಟಕ ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ, ಎಸ್‌ಎಸ್‌ವಿ ಗೆಳೆಯರ ಬಳಗ ದೋಂತಿಲ, ಟೀಮ್ ಸಿಂಧೂರ ನೆಲ್ಯಾಡಿ, ರಾಮನಗರ ಫ್ರೆಂಡ್ಸ್ ರಾಮನಗರ ಬಲ್ಯ, ವರಮಹಾಲಕ್ಷ್ಮಿ ಮಾತೃ ಭಜನಾ ಮಂಡಳಿ ಸೂರ್ಯನಗರ, ಬೆಥನಿ ಐಟಿಐ ನೆಲ್ಯಾಡಿ, ವರ್ತಕರ ಮತ್ತು ಕೈಗಾರಿಕಾ ಸಂಘ ನೆಲ್ಯಾಡಿ ಹಾಗೂ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಸೇರಿದಂತೆ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ರಕ್ತದಾನ ಶಿಬಿರ ಮೇ 1ರಂದು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಅವರು ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನವು ಮಾನವೀಯತೆಯ ಶ್ರೇಷ್ಠ ಸೇವೆಯಾಗಿದೆ. ನಮ್ಮ ದೇಹದಲ್ಲಿ ಇರುವ ಸ್ವಲ್ಪ ರಕ್ತ ಇನ್ನೊಬ್ಬರ ಜೀವ ಉಳಿಸುವ ಅಮೂಲ್ಯ ಸಂಪತ್ತಾಗಬಹುದು. ಸಮಾಜದಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಹೇಳಿದರು.


ಅತಿಥಿಯಾಗಿದ್ದ ಜೇಸಿಐ ವಲಯ ೧೫ರ ವಲಯ ಯೋಜನಾಧಿಕಾರಿ ಪ್ರದೀಪ್ ಕುಮಾರ್ ರೈ ಮಾತನಾಡಿ, ರಕ್ತದಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಸಮರ್ಪಕ ಜಾಗೃತಿ ಕೊರತೆಯಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಪನ್ಯಾಸ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಜೆಸಿಐ ನೆಲ್ಯಾಡಿ ಘಟಕದ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ವೈದ್ಯಾಧಿಕಾರಿ ಡಾ. ದೀಪಿಕಾ, ಸಂಯೋಜಕ ಆಂಟೋನಿ, ಜೆಸಿಐ ನೆಲ್ಯಾಡಿ ಘಟಕದ ನಿಕಟ ಪೂರ್ವಾಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಮಹಿಳಾ ಜೆಸಿ ಅಧ್ಯಕ್ಷೆ ನವ್ಯ ಪ್ರಸಾದ್, ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ಕಾರ್ಯಕ್ರಮದ ಯೋಜನಾ ನಿರ್ದೇಶಕರಾದ ಪ್ರಶಾಂತ್ ಹಾಗೂ ಹರೀಶ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೆಸಿಐ ಸದಸ್ಯೆ ದೀಪಿಕಾ ವೇದಿಕೆಗೆ ಆಹ್ವಾನಿಸಿದರು. ನಮಿತಾ ಅಮ್ಮುಂಜ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ವಂದಿಸಿದರು.

38 ಯೂನಿಟ್ ರಕ್ತ ಸಂಗ್ರಹ;
ಶಿಬಿರದಲ್ಲಿ ದಾನಿಗಳಿಂದ ಒಟ್ಟು 38 ಯೂನಿಟ್ ರಕ್ತ ಸಂಗ್ರಹ ಮಾಡಲಾಯಿತು.

LEAVE A REPLY

Please enter your comment!
Please enter your name here