







ಪುತ್ತೂರು: 2025 -26ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಬೆಳಿಯೂರು ಕಟ್ಟೆಗೆ 100% ಫಲಿತಾಂಶ ಲಭಿಸಿದೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಲಿಖಿತಾ ಡಿ.ಬಿ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಸ್ವರ್ಣ ಸಿ 594 ಅಂಕ ಪಡೆದು ದ್ವಿತೀಯ ಸ್ಥಾನ, ತಜ್ಕೀಯಾ 572 ಅಂಕ ಗಳನ್ನು ಪಡೆದು ತೃತಿಯ ಸ್ಥಾನವನ್ನು ಪಡೆದುಕೊಂಡಿದ್ದಾರೆ ಉಳಿದಂತೆ ಅಶ್ವಿನಿ 527, ಶಹದತುಲ್ ಕುಬ್ರ 525, ರಿಫಾನ 517 ಅಂಕಗಳನ್ನು ಪಡೆದುಕೊಂಡಿರುತ್ತಾರೆ. ಮೂರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ,16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದಾರೆ.












