ಪೆರಾಬೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

0

ಪೆರಾಬೆ: ಪೆರಾಬೆ ಗ್ರಾ.ಪಂ.ಅರಿವು ಕೇಂದ್ರದಲ್ಲಿ ಮೇ.11ರ ತನಕ ನಡೆಯುವ ಬೇಸಿಗೆ ಶಿಬಿರದ ಉದ್ಘಾಟನೆ ಮೇ.2ರಂದು ನಡೆಯಿತು.


ಕುಂತೂರು ಸರಕಾರಿ ಉ.ಹಿ.ಪ್ರಾ.ಶಾಲೆಯ ನಿವೃತ್ತ ಮುಖ್ಯಗುರು ಸುಚೇತಾಕುಮಾರಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಗೀತಾ, ಪೆರಾಬೆ ಗ್ರಾ.ಪಂ.ಪಿಡಿಒ ಅಮ್ಮಿ ಬಿ.ಪಿ. ಅವರು ದೀಪ ಪ್ರಜ್ವಲಿಸಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಕುಂತೂರುಪದವು ಶಾಲೆಯ ಶಿಕ್ಷಕಿ ಗಾಯತ್ರಿ ಅವರು ಮಕ್ಕಳಿಗೆ ಕ್ರಾಫ್ಟ್ ತಯಾರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು 42 ಮಕ್ಕಳು ಶಿಬಿರದಲ್ಲಿ ಭಾಗವಹಿಸಿದ್ದರು. ಮಕ್ಕಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅರಿವು ಕೇಂದ್ರದ ಮೇಲ್ವಿಚಾರಕಿ ಜಯಕುಮಾರಿ ಸ್ವಾಗತಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here