ಸೌಹಾರ್ದ ಯೂತ್ ಫ್ರೆಂಡ್ಸ್ ಅತೂರು ವತಿಯಿಂದ ಕ್ರಿಕೆಟ್ ಪಂದ್ಯಾಟ : ಸೂಡ ಅಧ್ಯಕ್ಷ ಮುಸ್ತಫ ಸುಳ್ಯರಿಗೆ ಸನ್ಮಾನ

0

ಪುತ್ತೂರು: ಸಾಮಾಜಿಕ ಜಾಲತಾಣದ ಯುಟ್ಯೂಬರ್, ಸಾಮಾಜಿಕ ಸೇವಾ ಕಾರ್ಯಕರ್ತ ಝೆಯಿನ್ ಆತೂರು ಸಾರಥ್ಯದಲ್ಲಿ ಲೀಗ್ ಮಾದರಿಯ ಸೌಹಾರ್ದ ಟ್ರೋಫಿ ಕ್ರಿಕೆಟ್ ಪಂದ್ಯಾಟ, ಹತ್ತು ಕುಟುಂಬಕ್ಕೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರಗಿತು.

ಈ ಕಾರ್ಯಕ್ರಮದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಕಡಬ ಪಟ್ಟಣ ಪಂಚಾಯತ್ ಸದಸ್ಯ ಫೈಸಲ್, ಸುಳ್ಯ ನಗರ ಪಂಚಾಯತ್ ನಿಕಟ ಪೂರ್ವ ಸದಸ್ಯ ಶರೀಫ್ ಕಂಠಿ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ,
ಉದ್ಯಮಿಗಳಾದ ಫಾರೂಕ್ ಅಮೈ, ರಫೀಕ್ ಅತೂರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here