ಬೆಟ್ಟಂಪಾಡಿ ನವೋದಯ ಪ್ರೌಢಶಾಲೆ ಬಳಿ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ದಳದಿಂದ ಕ್ಷಿಪ್ರ ಕಾರ್ಯಾಚರಣೆ

0

ನಿಡ್ಪಳ್ಳಿ; ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ವ್ಯಾಪ್ತಿಗೆ ಸೇರಿದ ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ಗುಡ್ಡ ಹೊತ್ತಿ ಉರಿದ ಘಟನೆ ಮೆ.4 ರಂದು ಮಧ್ಯಾಹ್ನ ಸಂಭವಿಸಿದೆ.

ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಕಿ ನಂದಿಸಿದ ಅಗ್ನಿಶಾಮಕ ದಳ:
ಬೆಂಕಿ ಬಿದ್ದ ವಿಷಯ ತಿಳಿದ ರಿಕ್ಷಾ ಚಾಲಕ ಶ್ರೀ ಪ್ರಸಾದ್ ಭಟ್ ಅವರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದರು. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಸ್ಥಳೀಯರ ಸಹಕಾರದಿಂದ ಸುಮಾರು ಒಂದು ಗಂಟೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಅಂದಾಜು ನಷ್ಟ:
ಸುಮಾರು 10 ಎಕರೆಗಳಷ್ಟು ಗುಡ್ಡದ ಮರ-ಗಿಡಗಳು ಸುಟ್ಟು ಹೋಗಿರಬಹುದು ಎಂದು ಅಂದಾಜಿಸಲಾಗಿದೆ. ಯಾರೋ ಪಾದಾಚಾರಿಗಳು ಬೀಡಿ ಸೇದಿ ಬಿಸಾಡಿದ ಕಾರಣ ಬೀಸಿದ ಗಾಳಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿರಬಹುದು ಎಂದು ಶಂಕಿಸಲಾಗಿದೆ.

ಸಹಕಾರ:
ನವೋದಯ ಪ್ರೌಢಶಾಲಾ ಸಂಚಾಲಕ ಪುಷ್ಪರಾಜ್ ಶೆಟ್ಟಿ, ರಾಮಕೃಷ್ಣ ಭಟ್ ದೇವಮಣಿ, ಮೆಸ್ಕಾಂ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಸಹಕಾರ ನೀಡಿದರು.

LEAVE A REPLY

Please enter your comment!
Please enter your name here