






ಉಪ್ಪಿನಂಗಡಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟವು ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೆರಿಯಲ್ಲಿ ಅಧಿಕಾರಕ್ಕೆ ಬಂದಿದ್ದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಬಸ್ ನಿಲ್ದಾಣ ಬಳಿ ಬಿಜೆಪಿ ವತಿಯಿಂದ ವಿಜಯೋತ್ಸವ ನಡೆಯಿತು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು, ಈ ಗೆಲುವು ಪ್ರಜಾತಂತ್ರ ವ್ಯವಸ್ಥೆ ಭದ್ರವಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿ. ಎನ್ಡಿಎ ಮೈತ್ರಿಕೂಟದ ಈ ಗೆಲುವಿ ಇಡೀ ಜಗತ್ತು ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಬಿಜೆಪಿಯಿಂದ ಹಾಗೂ ನರೇಂದ್ರ ಮೋದಿಯವರಿಂದ ಮಾತ್ರ ಈ ದೇಶಕ್ಕೆ ಭವಿಷ್ಯ ಎಂದು ಜನರು ತೀರ್ಮಾನಿಸಿ ಈ ಮೂಲಕ ಹಿಂದುತ್ವದ ಕಹಳೆಯನ್ನು ಊದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವನ್ನು ಸೋಲಿಸಿ ಬಿಜೆಪಿಗೆ ಸ್ಪಷ್ಟ ಬಹುಮತವನ್ನು ನೀಡುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಮುಂದಿನ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆ. ಇದಕ್ಕೆ ಶ್ರಮಿಸಿದ ರಾಷ್ಟ್ರ, ರಾಜ್ಯ ನಾಯಕರಾದಿಯಾಗಿ ಸಾಮಾನ್ಯ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.


ಬಿಜೆಪಿಯ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ದಡ್ಡು, ಉಪಾಧ್ಯಕ್ಷ ವಿದ್ಯಾಧರ ಜೈನ್, ಬಿಜೆಪಿಯ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ ಅತ್ರಮಜಲು, ಬಿಜೆಪಿ ಜಿಲ್ಲಾ ಪ್ರಕೋಷ್ಟದ ಸಹ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ಬಿಜೆಪಿ ಉಪ್ಪಿನಂಗಡಿ ಶಕ್ತಿ ಕೇಂದ್ರದ ಸಂಚಾಲಕ ಪ್ರಸಾದ್ ಬಂಡಾರಿ, ಹಿರೇಬಂಡಾಡಿ ಶಕ್ತಿಕೇಂದ್ರದ ಸಂಚಾಲಕ ನಿತಿನ್, ಉಪ್ಪಿನಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ದಯಾನಂದ ಸರೋಳಿ, ನಿರ್ದೇಶಕ ವಸಂತ ಪಿಜಕ್ಕಳ, ಮಾಜಿ ನಿರ್ದೇಶಕ ರಾಮಚಂದ್ರ ಮಣಿಯಾಣಿ, ಪ್ರಮುಖರಾದ ಉಮೇಶ್ ಶೆಣೈ, ಸಂತೋಷ್ ಕುಮಾರ್ ಪಂರ್ದಾಜೆ, ಸದಾನಂದ ನೆಕ್ಕಿಲಾಡಿ, ಸುಜಾತ ರೈ ಅಲಿಮಾರ್, ಉಷಾಚಂದ್ರ ಮುಳಿಯ, ಹರೀಶ್ ದರ್ಬೆ, ಯತೀಶ್ ಶೆಟ್ಟಿ, ಆದೇಶ್ ಶೆಟ್ಟಿ, ಕಂಗ್ವೆ ವಿಶ್ವನಾಥ ಶೆಟ್ಟಿ, ಸುರೇಶ ಪಂಚೇರು, ನವೀನ ಪೆರಿಯಡ್ಕ, ಸುಬ್ರಾಯ ನಾಯಕ್ ಅಜಿರಾಳ, ಹರೀಶ್ ಪಟ್ಲ, ಶೇಖರ ಮಡಿವಾಳ, ರಮೇಶ ಸುಭಾಶ್ನಗರ, ಕೃಷ್ಣ ಕೋಟೆ ಮತ್ತಿತರರು ಉಪಸ್ಥಿತರಿದ್ದರು.













