






ಪುತ್ತೂರು: ಪೂಜೆ ಕಾರ್ಯಕ್ರಮ ಮುಗಿಸಿ ಮನೆಗೆ ಕಾರಿನಲ್ಲಿ ತೆರಳುತ್ತಿದ್ದ ಪುರೋಹಿತರೊಬ್ಬರ ಕಾರನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಮೇ.4ರಂದು ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ನಡೆದಿದೆ.


ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಅವರ ಪುತ್ರ ಗಣೇಶ್ ವಿ(39ವ)ರವರು ಹಲ್ಲೆಗೊಳಗಾದವರು. ಅವರು ಪೂಜಾ ಕಾರ್ಯಕ್ರಮ ಮುಗಿಸಿ ಮನೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಬಕ ಗ್ರಾಮದ ವಿದ್ಯಾಪುರಕ್ಕೆ ತಲುಪಿದಾಗ ರಸ್ತೆ ಬದಿಯಲ್ಲಿರುವ ಮನೆಯೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ರಸ್ತೆಯಲ್ಲಿ ಜನರು ಮತ್ತು ವಾಹನ ದಟ್ಟನೆ ಇರುವ ಹಿನ್ನೆಲೆಯಲ್ಲಿ ಕಾರನ್ನು ನಿಧಾನವಾಗಿ ಚಲಾಯಿಸುತ್ತಿದ್ದ ವೇಳೆ ಮಗುವೊಂದು ಕಾರಿಗೆ ಅಡ್ಡ ಬಂದಿತ್ತು. ಇದೇ ಸಂದರ್ಭ ಕಾರನ್ನು ನಿಲ್ಲಿಸಿ ಏನಾಯಿತು ಎಂದು ನೋಡುತ್ತಿದ್ದಂತೆ ಅಪರಿಚಿತ ವ್ಯಕ್ತಿಯೊಬ್ಬರು ಮಗುವಿಗೆ ಕಾರು ತಾಗಿಸಿರುವ ಕುರಿತು ತಕರಾರು ತೆಗೆದು ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಗಣೇಶ್ ಭಟ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













