ನಾಳೆ ಮೇ.6ರಂದು ಕೊಂಡಾಡಿಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಜತ ಮಹೋತ್ಸವ ಬೆಳ್ಳಿಚುಕ್ಕಿ ಕಾರ್ಯಕ್ರಮ

0

ಆಲಂಕಾರು: ಕೊಂಡಾಡಿಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.6ರಂದು ರಜತ ಮಹೋತ್ಸವ ಬೆಳ್ಳಿ ಚುಕ್ಕಿ ಕಾರ್ಯಕ್ರಮ ನಡೆಯಲಿದೆ.

ಕೊಂಡಾಡಿಕೊಪ್ಪ ಕಿರಿಯ ಪ್ರಾಥಮಿಕ ಶಾಲೆ 2000-2001ರಲ್ಲಿ ಪ್ರಾರಂಭವಾಗಿ, 25 ವರ್ಷ ಪೂರೈಸಿ ರಜತ ಸಂಭ್ರಮದಲ್ಲಿರುವ ಸುಸಂದರ್ಭದಲ್ಲಿ ರಜತಮಹೋತ್ಸವ ಕಾರ್ಯಕ್ರಮ ಬೆಳ್ಳಿ ಚುಕ್ಕಿ ನಡೆಯಲಿದ್ದು, ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ, ಎಸ್.ಡಿ.ಎಂ.ಸಿ ಅಧ್ಯಕ್ಷರಿಗೆ, ಅಡುಗೆ ಸಿಬ್ಬಂದಿಗಳಿಗೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ರವರ ಸಭಾಧ್ಯಕ್ಷತೆಯಲ್ಲಿ ಮತ್ತು ಇತರ ಗಣ್ಯರ ಉಪಸ್ಥಿತಿಯಲ್ಲಿ ರಜತ ಮಹೋತ್ಸವ ಸಮಾರಂಭ ನಡೆಯಲಿದ್ದು, ಕಾರ್‍ಯಕ್ರಮದಲ್ಲಿ ಜನಪ್ರತಿನಿಧಿಗಳು, ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ. ಬೆಳಿಗ್ಗೆ ಧ್ವಜಾರೋಹಣ, ಪ್ರತಿಭಾ ಪುರಸ್ಕಾರ ಸಮಾರಂಭ, ಸಂಜೆ ಕೊಂಡಾಡಿಕೊಪ್ಪ ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬೆಳ್ಳಿ ಚುಕ್ಕಿ ರಜತ ಸಂಭ್ರಮ, ರಾತ್ರಿ ಶಾಲಾ ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು, ಸಂಸಾರ ಕಲಾವಿದೆರ್ ಪುತ್ತೂರು ಅಭಿನಯಿಸುವ ತುಳು ಸಾಮಾಜಿಕ ನಾಟಕ ನಂಬಿಕೆದಾಯೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸುವಂತೆ ಯು. ರಮೇಶ್ ಭಟ್ ಉಪ್ಪಂಗಳ ಗೌರವಾಧ್ಯಕ್ಷರು, ಮುತ್ತಪ್ಪ ಪೂಜಾರಿ ನೈಯ್ಯಲ್ಗ ಅಧ್ಯಕ್ಷರು, ಲತಾ ಅಧ್ಯಕ್ಷರು ಎಸ್.ಡಿ.ಎಂ.ಸಿ, ಬಿತಿನ್ ಶಾಲಾ ನಾಯಕ, ಜಯಂತ್ ವೈ ಮುಖ್ಯ ಗುರುಗಳು,
ಸರ್ವ ಸದಸ್ಯರು ರಜತ ಮಹೋತ್ಸವ ಸಮಿತಿ, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಊರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here